TSK

TSK · ರೋಮಾಪುರದವರಿಗೆ 11:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.

¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.

¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.

ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.