ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
TSK
TSK · ರೋಮಾಪುರದವರಿಗೆ 11:7
Treasury of Scripture Knowledge references in ಕನ್ನಡ IRV.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಆತನು ಅವರಿಗೆ, ‹“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.›
¶ ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.