TSK

TSK · ರೋಮಾಪುರದವರಿಗೆ 11:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

¶ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.

ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.

ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.

¶ “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.