ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ
TSK
TSK · ರೋಮಾಪುರದವರಿಗೆ 12:16
Treasury of Scripture Knowledge references in ಕನ್ನಡ IRV.
ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›
¶ ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
‹ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.›
¶ ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, ‹“ಬಡವರಾದ ನೀವು ಧನ್ಯರು;› ‹ದೇವರ ರಾಜ್ಯವು ನಿಮ್ಮದೇ.›
¶ ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
¶ ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
¶ ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.
ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.