TSK

TSK · ರೋಮಾಪುರದವರಿಗೆ 12:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.

ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.

ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.

“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.

¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

¶ ‹“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;›

ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.

“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.