TSK

TSK · ರೋಮಾಪುರದವರಿಗೆ 12:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›

ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

¶ ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.

¶ ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

¶ ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.

ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.

ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.

¶ ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ

ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.

ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

¶ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

¶ ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.