ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
TSK
TSK · ರೋಮಾಪುರದವರಿಗೆ 12:5
Treasury of Scripture Knowledge references in ಕನ್ನಡ IRV.
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.
ಎಫೆಸದವರಿಗೆ 1:23
TSK
ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
ಎಫೆಸದವರಿಗೆ 5:23
TSK
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
¶ ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.