TSK

TSK · ರೋಮಾಪುರದವರಿಗೆ 13:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು

ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.

ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, ‹“ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ”› ಎಂದು ಹೇಳಿದನು.

ಆತನು ಅವರಿಗೆ, ‹“ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ”› ಎಂದು ಹೇಳಿದನು.

ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

¶ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.