TSK

TSK · ರೋಮಾಪುರದವರಿಗೆ 14:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.›

‹ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.›

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

¶ ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.

ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.

¶ ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.

ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.

¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.