ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
TSK
TSK · ರೋಮಾಪುರದವರಿಗೆ 2:22
Treasury of Scripture Knowledge references in ಕನ್ನಡ IRV.
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
¶ ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.