TSK

TSK · ರೋಮಾಪುರದವರಿಗೆ 2:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.

‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›

ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.

ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.