TSK

TSK · ರೋಮಾಪುರದವರಿಗೆ 3:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

¶ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.

¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.