‹ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.›
TSK
TSK · ರೋಮಾಪುರದವರಿಗೆ 5:3
Treasury of Scripture Knowledge references in ಕನ್ನಡ IRV.
‹ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.›
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.