TSK

TSK · ರೋಮಾಪುರದವರಿಗೆ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.

ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.

‹ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.›

ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.