TSK

TSK · ರೋಮಾಪುರದವರಿಗೆ 6:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.

¶ ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

¶ ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.

¶ ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.

ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.

¶ ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.

¶ ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.

¶ ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.

¶ ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.

¶ ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.