“ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
TSK
TSK · ರೋಮಾಪುರದವರಿಗೆ 6:22
Treasury of Scripture Knowledge references in ಕನ್ನಡ IRV.
ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
¶ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
‹ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.›
‹ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.›
‹ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
¶ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
¶ ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.
¶ ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.