ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
TSK
TSK · ರೋಮಾಪುರದವರಿಗೆ 7:12
Treasury of Scripture Knowledge references in ಕನ್ನಡ IRV.
ನೆಹೆಮಿಯ 9:13
TSK
ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.
ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.