TSK

TSK · ರೋಮಾಪುರದವರಿಗೆ 7:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.

ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.

ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.

ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.

ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.

ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.

ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.

ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

¶ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.