ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
TSK
TSK · ರೋಮಾಪುರದವರಿಗೆ 8:14
Treasury of Scripture Knowledge references in ಕನ್ನಡ IRV.
ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
¶ ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.