ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
TSK
TSK · ರೋಮಾಪುರದವರಿಗೆ 8:39
Treasury of Scripture Knowledge references in ಕನ್ನಡ IRV.
ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
‹ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,›‹ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”› ಎಂದನು.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
¶ ‹“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು›‹ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.›
¶ ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.
ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.