ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ರೋಮಾಪುರದವರಿಗೆ 8:7
Treasury of Scripture Knowledge references in ಕನ್ನಡ IRV.
ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
‹ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.›
‹ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.›
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.