¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
TSK
TSK · ರೋಮಾಪುರದವರಿಗೆ 9:11
Treasury of Scripture Knowledge references in ಕನ್ನಡ IRV.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”