“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
TSK
TSK · ರೋಮಾಪುರದವರಿಗೆ 9:19
Treasury of Scripture Knowledge references in ಕನ್ನಡ IRV.
ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
‹ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು”› ಅಂದನು.
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
¶ “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.