TSK

TSK · ರೋಮಾಪುರದವರಿಗೆ 9:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

¶ ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.