TSK

TSK · ರೂತಳು 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.

ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.

‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›

¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.