TSK

TSK · ರೂತಳು 3:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.

ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.

ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.

ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’

ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.