¶ ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
TSK
TSK · ರೂತಳು 3:7
Treasury of Scripture Knowledge references in ಕನ್ನಡ IRV.
ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
¶ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,