¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
TSK
TSK · ರೂತಳು 4:13
Treasury of Scripture Knowledge references in ಕನ್ನಡ IRV.
ಆದಿಕಾಂಡ 25:21
TSK
ಆದಿಕಾಂಡ 30:2
TSK
¶ ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.
ಆದಿಕಾಂಡ 33:5
TSK
ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
ರೂತಳು 4:12
TSK
ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.
1 ಸಮುವೇಲನು 2:5
TSK
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
ಕೀರ್ತನೆಗಳು 127:3
TSK
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.