ಆದಿಕಾಂಡ 38:8
TSK
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
TSK
Treasury of Scripture Knowledge references in ಕನ್ನಡ IRV.
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.