¶ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
TSK
TSK · ತೀತನಿಗೆ 1:13
Treasury of Scripture Knowledge references in ಕನ್ನಡ IRV.
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
¶ ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.
¶ ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
¶ ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.