ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
TSK
TSK · ತೀತನಿಗೆ 3:1
Treasury of Scripture Knowledge references in ಕನ್ನಡ IRV.
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
‹“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ›‹ಕುಳಿತುಕೊಂಡಿದ್ದಾರೆ;›
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
¶ ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
¶ ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ
¶ ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.