TSK

TSK · ತೀತನಿಗೆ 3:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.

ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.

¶ ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.