ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
TSK
TSK · ತೀತನಿಗೆ 3:2
Treasury of Scripture Knowledge references in ಕನ್ನಡ IRV.
ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
¶ ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
¶ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
¶ ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.