TSK

TSK · ಜೆಕರ್ಯ 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,

ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.

ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.

¶ ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,

ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.

ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

¶ ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.