ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
TSK
TSK · ಜೆಕರ್ಯ 12:2
Treasury of Scripture Knowledge references in ಕನ್ನಡ IRV.
ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
¶ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.