TSK

TSK · ಜೆಕರ್ಯ 12:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.

ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”

ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”

¶ ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

¶ “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;

ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

‹ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು”› ಎಂದು ಹೇಳಿದನು.

ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.

¶ ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.