TSK

TSK · ಜೆಕರ್ಯ 14:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.

ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.