TSK

TSK · ಜೆಕರ್ಯ 2:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.

ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.

ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.

ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.

ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.

ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.

ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.

‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.

“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.

ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”

“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.

ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›

‹ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.›

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.

ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.