TSK

TSK · ಜೆಕರ್ಯ 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.

ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.

ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.

ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’

ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.

ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.

¶ “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

‹ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.›

‹ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!›

ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›