ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
TSK
TSK · ಜೆಕರ್ಯ 4:7
Treasury of Scripture Knowledge references in ಕನ್ನಡ IRV.
ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”
¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›
¶ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.