TSK

TSK · ಜೆಕರ್ಯ 4:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.

ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›

‹ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.›

‹ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ›‹ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.›