TSK

TSK · ಜೆಕರ್ಯ 5:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.

ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,

ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.

ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

¶ ‹“ಮತ್ತು, ನೀನು ಸುಳ್ಳಾಣೆಯಿಡಬಾರದು;›‹‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.›

‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›

ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?

ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

¶ ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.

‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.