TSK

TSK · ಜೆಕರ್ಯ 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?

ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.

ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.

ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.

ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.