TSK

TSK · ಜೆಕರ್ಯ 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.

ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.

¶ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.

ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.

¶ ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.

ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.

ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”

ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.

¶ ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.