TSK

TSK · ಜೆಕರ್ಯ 9:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.

ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.

ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.

ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?

ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.

ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.