TSK

TSK · ಚೆಫನ್ಯ 1:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.

¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.

ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.

ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.

ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.

ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.