TSK

TSK · ಚೆಫನ್ಯ 2:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.

ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ,

ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.