¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
TSK
TSK · ಚೆಫನ್ಯ 3:2
Treasury of Scripture Knowledge references in ಕನ್ನಡ IRV.
ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
“ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.