TSK

TSK · 1 ಯೋಹಾನನು 4:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.

ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.

ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.