TSK

TSK · 2 ಪೂರ್ವಕಾಲವೃತ್ತಾ 21:1

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.

ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.